“ಕೊರೊನಾ ಲಸಿಕೆ ಕೊರತೆ ಉಂಟಾಗದಂತೆ ಕ್ರಮ” : ಸಚಿವ ಡಾ.ಕೆ.ಸುಧಾಕರ್ ಬೆಂಗಳೂರು,ಮಾರ್ಚ್,25,2021(..) :ರಾಜ್ಯಕ್ಕೆ ನಿನ್ನೆ ತಡರಾತ್ರಿ 4 ಲಕ್ಷ ಡೋಸ್ ಕೊರೋನಾ ಲಸಿಕೆ ಆಗಮಿಸಿದ್ದು, ಕೇಂದ್ರ ಸರ್ಕಾರದ ಭರವಸೆಯಂತೆ ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ರವಾನೆಯಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.ಯಾವುದೇ ಕಾರಣಕ್ಕೂ ಲಸಿಕೆ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದ್ದು ನಾಗರಿಕರು ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. : -----..