ಇತ್ತೀಚೆಗೆ ಮೃತಪಟ್ಟ ಇಬ್ಬರು ಪತ್ರಕರ್ತರ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ ಬಿಎಸ್ ವೈ…. ಬೆಂಗಳೂರು,ಮಾರ್ಚ್,24,2021(..):ಇತ್ತೀಚೆಗೆ ಮೃತಪಟ್ಟ ಇಬ್ಬರು ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರವನ್ನ ಸಿಎಂ ಬಿಎಸ್ ಯಡಿಯೂರಪ್ಪ ಮಂಜೂರು ಮಾಡಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ()ಮನವಿ ಮೇರೆಗೆ ಇತ್ತೀಚೆಗೆ ಮೃತಪಟ್ಟ ಪತ್ರಕರ್ತರಾದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ವೆಂಕಟೇಶ ದೊರೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕೆ.ಖಾದರ್ ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ. ವೆಂಕಟೇಶ್ ದೊರೆ ಕುಟುಂಬಕ್ಕೆ ನೆರವು ನೀಡುವಂತೆ ಯಾದಗಿರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಕೆ.ಖಾದರ್ ಕುಟುಂಬಕ್ಕೆ ನೆರವು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು, ರಾಜ್ಯ ಸಂಘಕ್ಕೆ ಮನವಿ ಮಾಡಿತ್ತು. ಈ ಬಗ್ಗೆ ಮುಖ್ಯಮಂತ್ರಿ ಭೇಟಿ ಮಾಡಿದ್ದ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮನವಿ ಸಲ್ಲಿಸಿದ್ದರು. ಸಂಕಷ್ಟದಲ್ಲಿದ್ದ ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಮಂಜೂರು ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರು ಕೃತಜ್ಞತೆ ಸಲ್ಲಿಸಿದ್ದಾರೆ. : -- –-