ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಸಿದ್ದರಾಮಯ್ಯ ಆಗ್ರಹ… ಬೆಂಗಳೂರು,ಮಾರ್ಚ್,23,2021(..):ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಪ್ರಕರಣ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ, ಎಸ್ ಐಟಿ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಅದ್ದರಿಂದ ಹೈಕೋರ್ಟ್ ಸಿಜೆ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಲಿ. ಸದನದಲ್ಲಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿಗೆ ತಕ್ಷಣ ರಕ್ಷಣೆ ನೀಡಬೇಕು. ಆ ಯುವತಿ ತನ್ನನ್ನು ಬಳಸಿಕೊಂಡಿದ್ದಾರೆ ಎಂದು ಹೇಳಿರುವುದರಿಂದ ಅದು ರೇಪ್ ಎಂದಾಗಿರುತ್ತದೆ. ಹಾಗಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಬಿಜೆಪಿಯವರು ಮೇಟಿ ಪ್ರಕರಣವನ್ನು ಹೋಲಿಕೆ ಮಾಡುತ್ತಿದ್ದಾರೆ. ಇದನ್ನು ಫೇಕ್ ಸೀಡಿ ಎಂದು ಮಾಡಲು ಹೊರಟಿದ್ದಾರೆ. ರಮೇಶ್ ಪ್ರಕರಣವೇ ಬೇರೆ ಹೆಚ್. ವೈ. ಮೇಟಿ ಪ್ರಕಣವೇ ಬೇರೆ. ಮೊದಲು ರಮೇಶ್ ಜಾರಕಿಹೊಳಿ ವಿರುದ್ಧ ಎಫ್ ಐ ಆರ್ ದಾಖಲಿಸಲಿ. ತನಿಖೆಯಾಗಬೇಕಾದರೆ ಎಫ್ ಐ ಆರ್ ದಾಖಲಾಗಬೇಕಲ್ವಾ? ಎಫ್ ಐ ಆರ್ ದಾಖಲಿಸದೇ ಹೇಗೆ ತನಿಖೆ ಮಾಡ್ತಾರೆ..? ಎಂದು ಸಿದ್ಧರಾಮಯ್ಯ ಪ್ರಶ್ನಿಸಿದರು. : - –- – –-