ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಕೃಷಿ ಸಚಿವ ಬಿ.ಸಿ ಪಾಟೀಲ್… ಬೆಂಗಳೂರು,ಮಾರ್ಚ್,22,2021(..):ಕೇಂದ್ರದ ರೈತ-ಕಾರ್ಮಿಕ ವಿರೋಧಿ ಕೃಷಿ ಕಾಯ್ದೆಗಳ ರದ್ದತಿಗಾಗಿ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನಾಸ್ಥಳಕ್ಕೆ ಕೃಷಿ ಸಚಿವ ಬಿ.ಸಿ ಪಾಟೀಲ್ ಭೇಟಿ ನೀಡಿ ಮನವಿ ಸ್ವೀಕರಿಸಿದರು. ಫ್ರೀಡಂ ಪಾರ್ಕ್ ನಲ್ಲಿ ಕೇಂದ್ರದ ರೈತ-ಕಾರ್ಮಿಕ ವಿರೋಧಿ ಕೃಷಿ ಕಾಯ್ದೆಗಳ ರದ್ದತಿಗಾಗಿ ಪ್ರತಿಭಟನೆ ನಡೆಸುತ್ತಿರುವ ಸಂಯುಕ್ತ ಹೋರಾಟ-ಕರ್ನಾಟಕ ರೈತ ದಲಿತ ಕಾರ್ಮಿಕ ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯ ಪದಾಧಿಕಾರಿಗಳನ್ನು ಭೇಟಿ ಮಾಡಿ ಮುಖ್ಯಮಂತ್ರಿಗಳ ಸೂಚನೆಯನುಸಾರ ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ ಸ್ವೀಕರಿಸಿದರು. ಮನವಿಯಲ್ಲಿರುವ ಅಂಶಗಳನ್ನು ಸರ್ಕಾರದ ಗಮನಕ್ಕೆ ತರುವುದಾಗಿಯೂ ಈ ಸಂಬಂಧ ಸರ್ಕಾರದ ಜೊತೆ ಚರ್ಚಿಸುವುದಾಗಿ ಬಿಸಿಪಾಟೀಲ್ ಹೇಳಿದರು. : - , – ’ – – .