ಶಾಸಕ ಜಿ.ಟಿ.ದೇವೆಗೌಡಗೆ ಜೆಡಿಎಸ್ಸೆ ಅನಿವಾರ್ಯ- ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ… ಮೈಸೂರು,ಮಾರ್ಚ್,22,2021(..):ಈಗಾಗಲೇ ಜೆಡಿಎಸ್ ನಿಂದ ದೂರ ಉಳಿದಿರುವ ಶಾಸಕ ಜಿ.ಟಿ ದೇವೇಗೌಡರಿಗೆ ಟಾಂಗ್ ನೀಡಿರುವ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ, ಶಾಸಕ ಜಿ.ಟಿ.ದೇವೆಗೌಡಗೆ ಜೆಡಿಎಸ್ಸೆ ಅನಿವಾರ್ಯ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ, ಶಾಸಕ ಜಿ.ಟಿ.ದೇವೆಗೌಡಗೆ ಜೆಡಿಎಸ್ಸೆ ಅನಿವಾರ್ಯ. ಜೆಡಿಎಸ್‌ ಗೂ ಜಿ.ಟಿ.ದೇವೆಗೌಡ ಅನಿವಾರ್ಯ. ಸಿದ್ದರಾಮಯ್ಯ ಇರೋವರೆಗೂ ಕಾಂಗ್ರೆಸ್‌ನಲ್ಲಿ ಅವಕಾಶ ಇಲ್ಲ. ಈಗಾಗಲೇ ಬಿಜೆಪಿಗೆ ಹೋಗಿ ಬಂದಿದ್ದಾರೆ ಎಂದರು. ಸಿಡಿ ಪ್ರಕರಣವನ್ನ ಸಿಬಿಐಗೆ ವಹಿಸಬೇಕು‌…. ಕೊರೊನಾ ಬಂದು ಸಿಡಿ ಪ್ರಕರಣ ಮುಚ್ಚಿಕೊಂಡಿದೆ. ಬಿಜೆಪಿ‌ ನಾಯಕರೇ ಹೇಳಿರುವಂತೆ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ಸತ್ಯಾಸತ್ಯತೆ ಹೊರಬರಲು ಕೂಲಂಕುಶವಾಗಿ ಸಮಗ್ರ ತನಿಖೆ ಆಗಬೇಕು. ನಮ್ಮ ನಾಯಕ ಹೆಚ್.ಡಿ ಕುಮಾರಸ್ವಾಮಿ ಹೇಳಿದಂತೆ ತನಿಖೆ ಹಳ್ಳ ಹಿಡಿಯುತ್ತಿದೆ ಎಂದು ಕಿಡಿಕಾರಿದರು. ಬಿಜೆಪಿ ದಿಕ್ಕು ತಪ್ಪಿಸುವ ರಾಜಕಾರಣ ಮಾಡುತ್ತಿದೆ. ಕೊರೊನಾ ಎರಡನೇ ಅಲೆ ನೋಡುದ್ರೆ ಮತ್ತೆ ಆತಂಕ ಸೃಷ್ಟಿಸುತ್ತಿದೆ. ರಾಜ್ಯ ಸರ್ಕಾರ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಟೀಕಿಸಿದರು. …. – .. , . 22, 2021 (..): .. .. , . . . , . . . . . “ ’ . . ,” .: .. / .. / ../ : - - - - - .