ಇಬ್ಬರು ದ್ವಿಚಕ್ರ ವಾಹನ ಕಳ್ಳರ ಬಂಧನ : 6 ಲಕ್ಷ ಮೌಲ್ಯದ 12 ದ್ವಿಚಕ್ರ ವಾಹನಗಳು ವಶ ಮೈಸೂರು,ಮಾರ್ಚ್,21,2021(..): ದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿ ಸೇರಿದಂತೆ ಅವುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 6 ಲಕ್ಷ ಮೌಲ್ಯದ 12 ದ್ವಿಚಕ್ರ ವಾಹನಗಳು ವಶಪಡಿಸಿಕೊಂಡಿದ್ದಾರೆ.ನರಸಿಂಹರಾಜ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾಂತಿನಗರದ ಪಯಾಜ್ ಅಹಮ್ಮದ್ ಹಾಗೂ ಕೆಸರೆಯ ಮೊಕ್ತಾರ್ ಪಾಷಾ ಬಂಧಿತ ಆರೋಪಿಗಳಾಗಿದ್ದಾರೆ. ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳು ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು, ಕದ್ದ ಬೈಕ್ ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. : ----12 -6