ಹೈಕಮಾಂಡ್ ಒಪ್ಪಿದ್ರೆ ಸ್ಪರ್ಧೆಗೆ ಸಿದ್ಧ- ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ… ಬೆಳಗಾವಿ,ಮಾರ್ಚ್,18,2021(..):ಈಗಾಗಲೇ ರಾಜ್ಯದಲ್ಲಿನ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈ ನಡುವೆ ಹೈಕಮಾಂಡ್ ಒಪ್ಪಿದರೇ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸತೀಶ್ ಜಾರಕಿಹೊಳಿ, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನನ್ನನ್ನು ಸೇರಿ ಹಲವರ ಹೆಸರು ಕೇಳಿ ಬರುತ್ತಿದೆ. ಸದ್ಯಕ್ಕೆ ಇನ್ನು ಹೆಸರು ಅಂತಿಮವಾಗಿಲ್ಲ ಎಂದು ತಿಳಿಸಿದರು. ಹೈಕಮಾಂಡ್ ಹೇಳಿದರೆ ಸ್ಪರ್ಧೆ ಮಾಡುತ್ತೇನೆ. ಎರಡು ಮೂರು ದಿನಗಳಲ್ಲಿ ಅಭ್ಯರ್ಥಿಗಳ ಬಗ್ಗೆ ಗೊತ್ತಾಗಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು. ಏಪ್ರಿಲ್ 17 ರಂದು ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಮೇ.2 ರಂದು ಫಲಿತಾಂಶ ಹೊರಬೀಳಲಿದೆ. : - – –