ಲಾಕ್ ಡೌನ್, ನೈಟ್ ಕರ್ಫ್ಯೂ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸುಧಾಕರ್…. ಬೆಂಗಳೂರು,ಮಾರ್ಚ್,17,2021(..):ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಚಾರ ಚರ್ಚೆಗೆ ಬಂದಿದೆ. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಲಾಕ್ ಡೌನ್ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಡಾ.ಕೆ.ಸುಧಾಕರ್, ಕಳೆದ ಒಂದು ವರ್ಷದ ಅವಧಿಯಲ್ಲಿ ಸಾಕಷ್ಟು ಪಾಠಗಳನ್ನು ಕಲಿತಿದ್ದೇವೆ. ಕಳೆದ ಬಾರಿ ಲಸಿಕೆ ಇರಲಿಲ್ಲ. ಚಿಕಿತ್ಸೆ ನೀಡೋದು ಗೊತ್ತಿರಲಿಲ್ಲ. ಆದರೆ ಈ ಬಾರಿ ಲಸಿಕೆ ಇದೆ. ಚಿಕಿತ್ಸೆ ನೀಡೋದು ಗೊತ್ತಿದೆ. ಹೀಗಾಗಿ ಜನರು ಆತಂಕ ಪಡುವ ಅಗತ್ಯ ಇಲ್ಲ ಎಂದರು. ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ ಇಲ್ಲ. ಕೊರೋನಾ ನಿಯಂತ್ರಣಕ್ಕೆ ಬೇಕಾದ ಕ್ರಮಗಳನ್ನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. : - - – -