ಕೊರೋನಾ ಸೋಂಕಿಗೆ ತುತ್ತಾಗಿದ್ದ ಮಾಜಿ ಕೇಂದ್ರ ಸಚಿವ ದಿಲೀಪ್ ಗಾಂಧಿ ನಿಧನ ನವದೆಹಲಿ,ಮಾರ್ಚ್,17,2021(..): ಕೊರೋನಾಗೆ ತುತ್ತಾಗಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ದಿಲೀಪ್ ಗಾಂಧಿ ನಿಧನರಾಗಿದ್ದಾರೆ. ದಿಲೀಪ್ ಗಾಂಧಿ ಅವರಿಗೆ ಕೊರೊನಾ ಸೋಂಕು ತಗಲಿ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ದಿಲೀಪ್ ಗಾಂಧಿ ಮಹಾರಾಷ್ಟ್ರ ಅಹ್ಮದ್‌ ನಗರ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿದ್ದರು. ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಅವರು ಕೇಂದ್ರದಲ್ಲಿ ಹಡಗು ನಿರ್ಮಾಣದ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. : - - – -