ವಿಶ್ವಾಸಾರ್ಹತೆ ಕಳೆದುಕೊಂಡಿರುವ ಎಸ್ಐಟಿಯಿಂದ ನಿಸ್ಪಕ್ಷಪಾತ ತನಿಖೆ ಸಾಧ್ಯವಿಲ್ಲ” : ಶಾಸಕ ಈಶ್ವರ್ ಖಂಡ್ರೆ ಬೆಂಗಳೂರು,ಮಾರ್ಚ್,16,2021(..) :ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ನಿಸ್ಪಕ್ಷಪಾತ ತನಿಖೆಗೆ ಮೊದಲಿನಿಂದಲೂ ಒತ್ತಾಯಿಸುತ್ತಾ ಬಂದಿದ್ದೇವೆ. ವಿಶ್ವಾಸಾರ್ಹತೆ ಕಳೆದುಕೊಂಡಿರುವ ಎಸ್ಐಟಿಯಿಂದ ಅದು ಸಾಧ್ಯವಿಲ್ಲವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟೀಕಿಸಿದ್ದಾರೆ.ಅಪರಾಧ ಮಾಡುವವರು, ದೌರ್ಜನ್ಯ ಎಸಗುವವರು ಬಿಜೆಪಿಯವರು. ಆರೋಪ ಬೇರೆಯವರ ಮೇಲೆ ಮಾಡುತ್ತಾರೆ. ಹೈಕೋರ್ಟ್ ನಿಗಾದಲ್ಲೇ ಸಿಡಿ ಪ್ರಕರಣದ ತನಿಖೆ ಮಾಡಬೇಕು. ತಪ್ಪಿತಸ್ತರ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸರ್ಕಾರವನ್ನ ಒತ್ತಾಯಿಸುತ್ತೇನೆ ಎಂದಿದ್ದಾರೆ. ಬಿಜೆಪಿ ಸುಳ್ಳಿನ ಕಾರ್ಖಾನೆ. ಸುಳ್ಳನ್ನೇ ಸತ್ಯವೆಂದು ಬಿಂಬಿಸುತ್ತಾರೆ. ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಆರೋಪ ಮಾಡುವ ಕೀಳು ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. : ------