“ಹೆಣ್ಣಾಗಿ ಹುಟ್ಟಿ ಬದುಕುವುದೇ ಸವಾಲು” : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೈಸೂರು,ಮಾರ್ಚ್,16,2021(..): ಮಹಿಳೆಯರು ಸವಾಲು ಸ್ವೀಕರಿಸಬೇಕು ಎಂಬುದು ಸರಿಯಲ್ಲ. ಹೆಣ್ಣಾಗಿ ಹುಟ್ಟಿ ಬದುಕುವುದೇ ಸವಾಲು ಎನ್ನುವಂತ್ತಾಗಿದೆ. ಹೆಣ್ಣು ಭ್ರೂಣ ಹತ್ಯೆ ತಪ್ಪು. ಈ ಕುರಿತು ಮಹಿಳೆಯರು ಎಚ್ಚರಿಕೆವಹಿಸಬೇಕು. ಮನೆಯಿಂದಲೇ ಮಕ್ಕಳಲ್ಲಿ ಸಮಾನತೆಯ ಪಾಠ ಕಲಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಭಿಪ್ರಾಯವ್ಯಕ್ತಪಡಿಸಿದರು.ಮಾನಸಗಂಗೋತ್ರಿಯ ವಿಜ್ಞಾನಭವನದಲ್ಲಿ ಮೈಸೂರು ವಿವಿ ಮಹಿಳಾ ಉದ್ಯೋಗಿಗಳ ಸಮುದಾಯ, ಮಹಿಳಾ ಅಧ್ಯಯನ ಕೇಂದ್ರ, ಮಹಿಳಾ ಸಮಸ್ಯೆಗಳನ್ನು ನಿಭಾಯಿಸುವ ವೇದಿಕೆ ಮತ್ತು ಮೈತ್ರಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 110ನೇ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಬೌದ್ಧಿಕ ಸಾಮಾರ್ಥ್ಯಕ್ಕೆ ಹೆಚ್ಚಿನ ಒತ್ತು ಇತಿಹಾಸವನ್ನು ನೋಡಿದರೆ ಹಿಂದೆ ದೈಹಿಕ ಸಾಮಾರ್ಥ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿತ್ತು. ಆದರೆ, ಪ್ರಸ್ತುತ ಬೌದ್ಧಿಕ ಸಾಮಾರ್ಥ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಹೀಗಾಗಿ, ಮಹಿಳೆಯರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಅಡುಗೆ ಮನೆ, ಕುಟುಂಬ ನಿರ್ವಹಣೆಯಷ್ಟೇ ಅವರ ಬದುಕು ಮಹಿಳೆಯರ ಅಭಿವೃದ್ಧಿಗೆ ಪೋಷಕರ ಸಹಕಾರ ಬಹಳ ಪ್ರಮುಖವಾಗಿದೆ. ಹಿಂದೆ ಹೆಣ್ಣು ಮಕ್ಕಳಿಗೆ ಚಿಕ್ಕವಯಸ್ಸಿಗೆ ಮದುವೆ ಮಾಡಲಾಗುತ್ತಿತ್ತು. ಅಡುಗೆ ಮನೆ, ಕುಟುಂಬ ನಿರ್ವಹಣೆಯಷ್ಟೇ ಅವರ ಬದುಕು ಎನ್ನುವಂತ್ತಾಗಿತ್ತು. ಆದರೆ, ಕಾಲಾನಂತರದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿದ್ದರಿಂದ ಬದಲಾವಣೆ ಸಾಧ್ಯವಾಗಿದೆ ಎಂದು ಹೇಳಿದರು. ಮಹಿಳೆಯರು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ ಮಹಿಳೆಯರು ಮನೆ ಸೇರಿದಂತೆ ತಮ್ಮ ಸುತ್ತಮುತ್ತಲಿನಲ್ಲಿರುವವರಿಗೆ ಬೆಂಬಲ, ಪ್ರೋತ್ಸಾಹ ನೀಡುವ ಕಾರ್ಯ ಮಾಡಬೇಕು. ಪ್ರಸ್ತುತ ಒತ್ತಡದ ಬದುಕಿನಲ್ಲಿ ವೃತ್ತಿ ಹಾಗೂ ಕುಟುಂಬದ ನಿರ್ವಹಣೆಯ ಜೊತೆಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಮಹಿಳೆಯರು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಯೋಗ, ವ್ಯಾಯಾಮ, ಧ್ಯಾನ ಹಾಗೂ ಆಗಾಗ ಆರೋಗ್ಯ ತಪಾಸಣೆಯ ಮೂಲಕ ಆರೋಗ್ಯದ ಕಡೆ ಗಮನಕೊಡಿ. ಪೌಷ್ಠಿಕವಾದ ಆಹಾರ ಸೇವಿಸಬೇಕು. ಆಸಕ್ತಿಯ ಕ್ಷೇತ್ರದಲ್ಲಿ ತೊಡಗಿಕೊಳ್ಳಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅಧ್ಯಕ್ಷತೆವಹಿಸಿದ್ದರು. ಶ್ರೀ ಜಯದೇವ ಆಸ್ಪತ್ರೆ ಮಕ್ಕಳ ಹೃದ್ರೋಗ ಮುಖ್ಯಸ್ಥರಾದ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ, ಕುಲಸಚಿವ ಪ್ರೊ.ಆರ್.ಶಿವಪ್ಪ ಇತರರು ಉಪಸ್ಥಿತರಿದ್ದರು. …. “ ”: , . 16, 2021 (..): “ . . . . ,” , , . 110th ’ , , ’ , , , .“ . , . , . ’ . , . , ,” . , , , .. . , -, , . , , , , . ., , .: / / / / ’ : ------