ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ… ಬೆಂಗಳೂರು,ಮಾರ್ಚ್,15,2021(..):ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸ್ಪರ್ಧೆ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಾನು ಮುಂದಿನ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ.. ಎಲ್ಲಿಗೂ ಓಡಿ ಹೋಗುವುದಿಲ್ಲ, ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ ಇಲ್ಲವೇ ಎಂಬ ಬಗ್ಗೆ ಇಡೀ ರಾಜ್ಯದ ಜನತೆಗೆ ಕುತೂಹಲವಿದೆ. ಈ ಸ್ಪರ್ಧೆ ಬಗ್ಗೆ ತಿಳಿಸುವಂತೆ ಹೇಳಿದರು. ಸ್ಪೀಕರ್ ಪ್ರಶ್ನೆಗೆ ಉತ್ತರಿಸಿದ ವಿಪಕ್ಷ ನಾಯಕ ಸಿದ್ಧರಾಮಯ್ಯ, ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ. ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಸ್ಪಷ್ಟನೆ ನೀಡಿದರು. : - - –- - .