ಸಾರ್ವಜನಿಕರು ಎಚ್ಚರಿಕೆ ವಹಿಸದಿದ್ದರೆ ಕಠಿಣ ಕ್ರಮ ಅನಿವಾರ್ಯ- ಆರೋಗ್ಯ ಸಚಿವ ಕೆ. ಸುಧಾಕರ್… ಬೆಂಗಳೂರು,ಮಾರ್ಚ್,16,2021(..): ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗ್ತಿದೆ. ಹೀಗಾಗಿ ಸಾರ್ವಜನಿಕರು ಮೈಮರೆತರೆ ಕಠಿಣ ಕ್ರಮ ಅನಿವಾರ್ಯವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗ್ತಿದೆ. ಇತ್ತ ಮಹಾರಾಷ್ಟ್ರದಲ್ಲಿ ಕೂಡ ಏರಿಕೆಯಾಗ್ತಿದೆ ಅಂತ ಎಚ್ಚರಿಕೆ ಕೊಟ್ಟಿದ್ದಾರೆ. ಸಿಎಂ ನಾಗರಿಕರಿಗೆ ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ. ಮಾಸ್ಕ್ ಸಾಮಾಜಿಕ ಅಂತರ ಕಾಪಾಡಿ ಅಂತಾ ಹೇಳಿದ್ದಾರೆ. ಇಲ್ಲದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತೆ ಎಂದು ಸಿಎಂ ಹೇಳಿದ್ದಾರೆಂದು ತಿಳಿಸಿದರು. ನಾಳೆ ಪ್ರಧಾನಿ ಮೋದಿ ಜತೆ ವಿಡಿಯೋ ಕಾನ್ಫರೆನ್ಸ್ ಇದೆ. ವಿಡಿಯೋ ಕಾನ್ಫರೆನ್ಸ್ ಬಳಿಕ ಸಿನಿಮಾ, ಧರಣಿ ಅಷ್ಟೇ ಅಲ್ಲಾ ಎಲ್ಲಾ ಚಟುವಟಿಕೆಗಳ ಮೇಲೂ ನಿಗಾ ಇಡಲಾಗುತ್ತದೆ. ವಿಡಿಯೋ ಕಾನ್ಫರೆನ್ಸ್ ವೇಳೆ ಕೆಲ ನಿರ್ದೇಶನ ಸಿಗಬಹುದು . ಸಭೆ ಬಳಿಕ ಸಿಎಂ ಬಿಎಸ್ ವೈ ನಿರ್ಧಾರ ತೆಗೆದುಕೊಳ್ಳುತ್ತಾರೆ. ಟಫ್ ರೂಲ್ಸ್ ಜಾರಿಯಾಗುತ್ತಾ ಕಾದು ನೋಡಬೇಕಿದೆ. ಪ್ರತಿಭಟನೆ, ಬಹಿರಂಗ ಸಭೆ-ಸಮಾರಂಭಗಳಿಗೆ ರೂಲ್ಸ್ ವಿಚಾರ ಕೂಡ ಆ ಬಳಿಕ ನಿರ್ಧಾರ ಆಗುತ್ತದೆ ಎಂದು ಸಚಿವ ಸುಧಾಕರ್ ತಿಳಿಸಿದರು. “ ’ : . , . 16, 2021 (..): “ -19 . , ,” . . . . “ . . , ,” . , , , ., . . . , .: . / -19 / / / / / : – –-- –.