ಪಂಚಮಸಾಲಿಗೆ 2ಎ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿದ್ದ ಧರಣಿ ತಾತ್ಕಾಲಿಕವಾಗಿ ಅಂತ್ಯ… ಬೆಂಗಳೂರು,ಮಾರ್ಚ್,15,2021(..):ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದ ಸಮುದಾಯದ ಮುಖಂಡರು ಮತ್ತು ಸ್ವಾಮೀಜಿಗಳು ಧರಣಿಯನ್ನ ತಾತ್ಕಾಲಿಕವಾಗಿ ಅಂತ್ಯಗೊಳಿಸಿದ್ದಾರೆ. ಮೀಸಲಾತಿ ಬಗ್ಗೆ ಆರು ತಿಂಗಳಲ್ಲಿ ವರದಿ ಪಡೆಯುವ ಬಗ್ಗೆ ಸಿಎಂ ಯಡಿಯೂರಪ್ಪ ಭರವಸೆ ನೀಡಿದ ಹಿನ್ನೆಲೆಯಲ್ಲಿ ಧರಣಿಯನ್ನ ತಾತ್ಕಾಲಿಕವಾಗಿ ಹಿಂಪಡೆದಿರುವುದಾಗಿ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಜಯಮೃತ್ಯುಂಜಯ ಸ್ವಾಮೀಜಿಗಳು, ಸಿಎಂ ಭರವಸೆ ಹಿನ್ನೆಲೆಯಲ್ಲಿ 6 ತಿಂಗಳವರೆಗೆ ಧರಣಿಯನ್ನ ಅಂತ್ಯಗೊಳಿಸಿದ್ದೇವೆ. ಮೀಸಲಾತಿ ಹೋರಾಟಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆನ್ನೆಲುಬಾಗಿದ್ದರು. ಅವರ ಸಲಹೆ ಮೇರೆಗೆ ಸಮುದಾಯದ ಎಲ್ಲರ ಒಪ್ಪಿಗೆ ಮೇರೆಗೆ ಧರಣಿ ಅಂತ್ಯಗೊಳಿಸಿದ್ದೇವೆ. 6 ತಿಂಗಳೊಳಗೆ ಮೀಸಲಾತಿ ಬಗ್ಗೆ ನಿರ್ಧಾರವಾಗಬೇಕು. ಇನ್ನು ನಾವು ತಪ್ಪು ಮಾತನಾಡಿದ್ರೆ ಅದನ್ನ ಹೊಟ್ಟೆಗೆ ಹಾಕಿಕೊಳ್ಳಿ ಎಂದು ಹೇಳಿದರು. ಈ ಬಗ್ಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಮಗ್ರ ಮೀಸಲಾತಿ ನೀಡುವಂತೆ ಸಿಎಂ ಗೆ ಮನವಿ ಮಾಡಿದ್ದೆವು. ಎಲ್ಲಾ ಉಪಜಾತಿಗಳನ್ನೂ ಮೀಸಲಾತಿಗೆ ಸೇರಿಸುವಂತೆ ಮನವಿ ಮಾಡಿದ್ದೇವೆ. ಈಗ ಆರು ತಿಂಗಳ ಒಳಗಾಗಿ ವರದಿ ಸಿದ್ದಪಡಿಸುವಂತೆ ಸೂಚಿಸಲಾಗಿದೆ. ಆರು ತಿಂಗಳಲ್ಲಿ ಸ್ಪಷ್ಟನೆ ದೊರೆಯಲಿದೆ. ಹೀಗಾಗಿ ಸಿಎಂಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದರು. …. 2A , .15, 2021 (..): 2A . .. , ’ .. ’. ’ .“ . . . ., , ” . , . , .”: / .. / / / 2A : – -2A-- – –