ಇಂದು ಚಾಮುಂಡಿ ಬೆಟ್ಟದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ… ಮೈಸೂರು,ಮಾರ್ಚ್,15,2021(..):ಚಾಮುಂಡಿ ಬೆಟ್ಟ ದೇವಸ್ಥಾನದ ಆಡಳಿತ ಮಂಡಳಿಯಿಂದ ಚಾಮುಂಡಿ ಬೆಟ್ಟದಲ್ಲಿ ಇಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಪ್ರತಿ ವರ್ಷದಂತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಇಂದು ಸಹ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದ್ದು, ಈ ವೇಳೇ ಒಟ್ಟು 16 ಜೋಡಿ ನೂತನ ಜೀವನಕ್ಕೆ ಕಾಲಿಡಲಿದ್ದಾರೆ. ಇನ್ನು ಸಾಮೂಹಿಕ ವಿವಾಹದಲ್ಲಿ ಮೈಸೂರಿನ 11 ಜೋಡಿ ಹಾಗೂ ನಂಜನಗೂಡಿನ 5 ಜೋಡಿಗಳು ಹಸೆಮಣೆ ಏರಲಿದ್ದಾರೆ. ಸಾಮೂಹಿಕ ವಿವಾಹಕ್ಕೆ ಕಾರ್ಯಕ್ರಮಕ್ಕೆ ಚಾಮುಂಡಿ ಬೆಟ್ಟದಲ್ಲಿ ಸಿದ್ದತೆ ನಡೆಸಲಾಗಿದೆ. : - – - - .