ಡಂಗೂರ ಸಾರುವ ಮೂಲಕ ಕೊರೊನಾ ಲಸಿಕೆ ಜಾಗೃತಿ : ಆರೋಗ್ಯ ಸಚಿವ ಡಾ.ಸುಧಾಕರ್ ಮೆಚ್ಚುಗೆ ಬೆಂಗಳೂರು,ಮಾರ್ಚ್,14,2021(..) :ಡಂಗೂರ ಸಾರುವ ಮೂಲಕ ಕೊರೊನಾ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸುತ್ತಿರುವ ದೃಶ್ಯ ಪ್ರೇರಣಾದಾಯಕವಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವಿಟರ್ ನಲ್ಲಿ ವಿಡಿಯೋ ಶೇರ್ ಮಾಡುವ ಮೂಲಕ ಮೆಚ್ಚುಗೆವ್ಯಕ್ತಪಡಿಸಿದ್ದಾರೆ.ಗದಗ ಜಿಲ್ಲೆಯ ಜಕ್ಕಲಿ ಗ್ರಾಮದಲ್ಲಿ ಡಂಗೂರ ಸಾರುವ ಮೂಲಕ ಲಸಿಕೆ ಕುರಿತು ಜಾಗೃತಿ ಮೂಡಿಸಲಾಗಿದ್ದು, ಈ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ಕುರಿತು ಜನಾಂದೋಲನವಾಗಬೇಕು ಎಂದಿದ್ದಾರೆ. ಅದರಂತೆ ಹಳ್ಳಿಗಳಲ್ಲಿ ಲಸಿಕೆ ಜಾಗೃತಿಗಾಗಿ ಸಾಂಪ್ರದಾಯಿಕ ವಿಧಾನಗಳನ್ನು ಬಳಸುತ್ತಿರುವುದು ಸ್ಪೂರ್ತಿದಾಯಕವಾಗಿದೆ ಎಂದು ತಿಳಿಸಿದರು. : --- ----.-