ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ, ಎಸ್ ಐ ಟಿ ಬದಲಿಗೆ, ಸಿಬಿಐ ತನಿಖೆಗೆ ಒಪ್ಪಿಸಿ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಗಳೂರು,ಮಾರ್ಚ್,14,2021(..) :ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ತನಿಖೆ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅನುಮಾನವ್ಯಕ್ತಪಡಿಸಿದ್ದು, ಸಿಬಿಐ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಿದ್ದಾರೆ. ಎಸ್ ಐ ಟಿ ತನಿಖೆ ನಡೆಸುತ್ತಿರುವವರಲ್ಲಿ ಓರ್ವ ಅಧಿಕಾರಿ ವಿಜಯೇಂದ್ರ ಹೇಳಿದಂತೆ ಕೇಳುತ್ತಾರೆ. ಹೀಗಾಗಿ, ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ಪಕ್ಷಗಳ ಒಬ್ಬೊಬ್ಬ ನಾಯಕರು ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ರಮೇಶ್ ಜಾರಕಿಹೊಳಿಯನ್ನು ಮುಗಿಸುವುದಕ್ಕೆ ವ್ಯವಸ್ಥಿತವಾಗಿ ತಂತ್ರ ರೂಪಿಸಿದ್ದು, ನೆನ್ನೆ ಯುವತಿಯ ವಿಡಿಯೋ ಬಿಡುಗಡೆ ಮಾಡಲಾಗಿದೆ. ಹೀಗಾಗಿ, ಎಸ್ ಐ ಟಿ ತನಿಖೆ ಬದಲಿಗೆ, ಸಿಬಿಐ ಗೆ ವಹಿಸುವುದು ಸೂಕ್ತ ಎಂದು ತಿಳಿಸಿದ್ದಾರೆ. : - -------