ಮಾನಸಗಂಗೋತ್ರಿ ವಿದ್ಯಾರ್ಥಿನಿಯಲದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿ ನೇಣಿಗೆ ಶರಣು…! ಮೈಸೂರು,ಮಾರ್ಚ್,14,2021(..) :ಮೈಸೂರು ವಿವಿ ಮಾನಸಗಂಗೋತ್ರಿಯ ಸ್ನಾತಕೋತ್ತರ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ.ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಯಾದಗಿರಿ ಜಿಲ್ಲೆಯ ಸಿದ್ದರಾಮೇಶ್ವರ (24) ಎಂದು ಗುರುತಿಸಲಾಗಿದ್ದು, ಮೈಸೂರು ವಿ.ವಿ.ಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ. ರಾತ್ರಿ ಕೊಠಡಿಯಲ್ಲಿರುವ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ವಿ.ವಿ.ಯ ಸಮಾಜಶಾಸ್ತ್ರ ವಿಷಯದಲ್ಲಿ ಅಧ್ಯಯನದ ದ್ವಿತೀಯ ವರ್ಷದ ವಿದ್ಯಾರ್ಥಿ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. : ---’--- …!