ಬಸ್ ಮೇಲೆ ಕಲ್ಲು ತೂರಾಟ: ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಸ್ಥಗಿತ…. ಬೆಂಗಳೂರು,ಮಾರ್ಚ್,13,2021(..): ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಮತ್ತೆ ತಾರಕಕ್ಕೇರಿದ್ದು ಈ ನಡುವೆ ಎರಡೂ ರಾಜ್ಯಗಳ ನಡುವೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು ಇಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಮಹಾರಾಷ್ಟ್ರ ಬಸ್ ಮೇಲೆ ಕಲ್ಲುತೂರಾಟ ನಡೆಸಲಾಗಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಕಿಚ್ಚು ಹಚ್ಚಲು ಈ ರೀತಿ ಕಲ್ಲು ತೂರಾಟ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಿಂದ –ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ 400 ಬಸ್ ಗಳು ಸಂಚರಿಸುತ್ತಿದ್ದವು. ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್ ಗಳು ಸಂಚಾರ ನಡೆಸುತ್ತಿದ್ದವು. ಈ ನಡುವೆ ಕೊಲ್ಲಾಪುರದಲ್ಲಿ ಗಲಾಟೆ ಹಿನ್ನೆಲೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. : – - - –