ಇಂದಿನಿಂದ ಭಾರತ-ಇಂಗ್ಲೆಂಡ್ ಟಿ20 ಫೈಟ್ ಬೆಂಗಳೂರು, ಮಾರ್ಚ್ 12, 2021 (..):ಇಂದಿನಿಂದ ಭಾರತ ಮತ್ತು ಇಂಗ್ಲೆಂಡ್ ನಡುವೆ ಟಿ20 ಸರಣಿ ಆರಂಭವಾಗಲಿದೆ. ಎಲ್ಲಾ ಪಂದ್ಯಗಳು ವಿಶ್ವದ ಬೃಹತ್ ಕ್ರೀಡಾಂಗಣ ಅಹಮ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಇಂದು ಮೊದಲ ಪಂದ್ಯ ಸಂಜೆ 7ಕ್ಕೆ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಟೀಂ ಇಂಡಿಯಾ ವಿರಾಟ್ ಕೊಹ್ಲಿಗೆ ಇದು ಫಾರ್ಮ್ ಉಳಿಸಿಕೊಳ್ಳಲು ಇದು ಉತ್ತಮ ವೇದಿಕೆಯಾಗಲಿದೆ. ಇನ್ನು ಇಂಗ್ಲೆಂಡ್ ತಂಡ ಟೆಸ್ಟ್ ಸರಣಿ ಸೇಡು ತೀರಿಸಿಕೊಳ್ಳಲು ತಯಾರಿ ನಡೆಸಿದೆ.