ಬಾಲಚಂದ್ರ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ ನೀಡಬೇಕು- ಸಚಿವ ಶ್ರೀಮಂತ ಪಾಟೀಲ್….. ಬೆಳಗಾವಿ,ಮಾರ್ಚ್,11,2021(..):ರಾಸಲೀಲೆ ವಿಡಿಯೋ ಬಿಡುಗಡೆಯಾದ ಬೆನ್ನಲ್ಲೆ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು, ಇದೀಗ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ಕೂಗು ಕೇಳಿ ಬಂದಿದೆ. ಹೌದು, ಶಾಸಕ ಮಹೇಶ್ ಕುಮುಟಳ್ಳಿ ಬಳಿಕ ಇದೀಗ ಸಚಿವ ಶ್ರೀಮಂತ ಪಾಟೀಲ್ ಸಹ ಬಾಲಚಂದ್ರ ಜಾರಕಿಹೊಳಿಗೆ ಮಂತ್ರಿಗಿರಿ ನೀಡುವಂತೆ ಮನವಿ ಮಾಡಿದ್ದಾರೆ. ಬಾಲಚಂದ್ರ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ ನೀಡಬೇಕು. ಇದರಿಂದ ಈ ಭಾಗದ ಸಾಕಷ್ಟು ಯೋಜನೆಗಳು ಪೂರ್ಣಗೊಳ್ಳಲು ಅನುಕೂಲವಾಗುತ್ತದೆ ಎಂದು ಸಚಿವ ಶ್ರೀಮಂತ ಪಾಟೀಲ್ ತಿಳಿಸಿದ್ದಾರೆ. ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಶ್ರೀಮಂತಪಾಟೀಲ್, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ಇದರಲ್ಲಿ ಯಾರಿದ್ದಾರೋ ಅವರಿಗೆ ಶಿಕ್ಷೆಯಾಗಬೇಕು. ಇದು ಎಲ್ಲರ ಒತ್ತಾಯವಾಗಿದೆ ಎಂದು ತಿಳಿಸಿದರು. : - —-