ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ಸಿಎಂಗೆ ಮನವಿ- ಶಾಸಕ ಮಹೇಶ್ ಕುಮುಟಳ್ಳಿ…. ಬೆಳಗಾವಿ,ಮಾರ್ಚ್,10,2021(..):ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತರಾದ ಶಾಸಕ ಮಹೇಶ್ ಕುಮುಟಳ್ಳಿ ತಿಳಿಸಿದರು. ರಾಸಲೀಲೆ ಸಿಡಿ ಬಿಡುಗಡೆಯಾದ ಹಿನ್ನೆಲೆ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ಕೂಗು ಕೇಳಿ ಬಂದಿದೆ. ಈ ಕುರಿತು ಮಾತನಾಡಿರುವ ಶಾಸಕ ಮಹೇಶ್ ಕುಮುಟಳ್ಳಿ, ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ 15 ರಿಂದ 16 ಶಾಸಕರು ಸಿಎಂಗೆ ಮನವಿ ಮಾಡಿದ್ದೇವೆ. ಈ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ ಎಂದರು. ಇನ್ನು ರಮೇಶ್ ಜಾರಕಿಹೊಳಿ ದೂರು ಕೊಡುವ ಮಾಹಿತಿ ಇಲ್ಲ. ಅವರಿಗೆ ನೈತಿಕವಾಗಿ ಬೆಂಬಲ ನೀಡುತ್ತೇವೆ. ಯಾವುದೇ ಸಂದರ್ಭದಲ್ಲೂ ಬೆಂಬಲ ನೀಡುತ್ತೇವೆ ಎಂದರು. : – - – -- .