ನಾಲ್ಕು ದಿನಗಳ ಕಾಲ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ… ಚಾಮರಾಜನಗರ,ಮಾರ್ಚ್,10,2021(..):ನಾಳೆ ಶಿವರಾತ್ರಿ ಹಬ್ಬ, ಹೆಚ್ಚಿನ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದಿನಿಂದ 4 ದಿನಗಳ ಕಾಲ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸರಳವಾಗಿ ಶಿವರಾತ್ರಿ ಜಾತ್ರ ಮಹೋತ್ಸವ ಆಚರಿಸಲಾಗುತ್ತಿದ್ದು, ಹೀಗಾಗಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಲೆ ಮಹದೇಶ್ವರ ಬೆಟ್ಟಕ್ಕೆ ಹೊರಗಿನ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಮಲೆಮಹದೇಶ್ವರ ರಥೋತ್ಸವಕ್ಕೆ ಪ್ರತಿವರ್ಷ ಲಕ್ಷಾಂತರ ಜನರು ಬರುತ್ತಿದ್ದರು. ಈ ಬಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು ಸ್ಥಳೀಯರಿಗೆ ಮಾತ್ರ ಮಾದಪ್ಪನ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. …. , . 10, 2021 (..): .., 11.03.2021, . . ’ , .: / / / 11.03.2021 : –- – .