ಮರ ಕಡಿಯುವ ವೇಳೆ ಮರ ಬಿದ್ದು ಮೂವರು ದುರ್ಮರಣ…. ದಕ್ಷಿಣ ಕನ್ನಡ,ಮಾರ್ಚ್,9,2021(..):ಮರ ಕತ್ತರಿಸುತ್ತಿದ್ದ ವೇಳೆ ಮರ ಬಿದ್ದು ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲ್ಲೂಕಿನ ಪಟ್ರಮೆ ಗ್ರಾಮದ ಅನಾರು ಬಳಿ ಈ ಘಟನೆ ನಡೆದಿದೆ. ಪ್ರಶಾಂತ್(21), ಸ್ವಸ್ತಿಕ್(23) ಗಣೇಶ್ (38) ಮೃತಪಟ್ಟವರು ಎಂದು ಹೇಳಲಾಗಿದೆ. ಕಾಯಿಲ ಸಮೀಪ ಧೂಪದ ಮರವೊಂದನ್ನು ಕಡಿದು ಉರುಳಿಸುವ ವೇಳೆ ಮರದ ಅಡಿಗೆ ಸಿಲುಕಿ ಮೂವರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ., ಧರ್ಮಸ್ಥಳ ಪೊಲೀಸ್ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. - - –-