ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ: ನೋಂದಣಿ, ಮುದ್ರಾಂಕ ಶುಲ್ಕ ಇಳಿಕೆ- ಬಜೆಟ್ ನಲ್ಲಿ ಘೋಷಣೆ… ಬೆಂಗಳೂರು,ಮಾರ್ಚ್,8,2021(..):ಪ್ಲ್ಯಾಟ್ ಗಳ ಮುದ್ರಾಂಕ ಶುಲ್ಕ ಇಳಿಕೆ, ಮೊದಲನೇ ನೋಂದಣಿ ಶೇ. 3 ರಷ್ಟು ಮಾತ್ರ ತೆರಿಗೆ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರು 2020-2021 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದು, ಅಬಕಾರಿ ತೆರಿಗೆ ಹೆಚ್ಚಳ ಇಲ್ಲ. ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ. 45 ಲಕ್ಷ ರೂಪಾಯಿವರೆಗಿನ ಫ್ಲ್ಯಾಟ್ ಖರೀದಿಗೆ ಮುದ್ರಾಂಕ ಶುಲ್ಕ ಇಲ್ಲ. ನೋಂದಣಿ, ಮುದ್ರಾಂಕ ಶುಲ್ಕವನ್ನ ಶೇ.5ರಿಂದ 3ಕ್ಕೆ ಇಳಿಕೆ ಮಾಡಲು ನಿರ್ಧರಿಸಲಾಗಿದೆ ಎಂದರು. ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ ಆನ್ ಲೈನ್ ಮಾರುಕಟ್ಟೆ. ಯಶವಂತಪುರ ಎಪಿಎಂಸಿ ಮೇಲ್ದರ್ಜೆಗೆ ಏರಿಕೆ, ಭದ್ರಾ ಮೇಲ್ದಂಡೆ ಯೋಜನೆಗೆ 21,477 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತದೆ. ಸಿಂಗೇನ ಅಗ್ರಹಾರದಲ್ಲಿ ತರಕಾರಿ ಮಾರುಕಟ್ಟೆ, ಗೋದಾಮು ಮತ್ತು ಅಂಗಡಿ ನಿರ್ಮಾಣಕ್ಕೆ ಅನುದಾನ ನೀಡಲಾಗುತ್ತದೆ. ಬ್ಯಾಡಗಿ ಮೆಣಸಿನಕಾಯಿಗಾಗಿ ಗುಣ ವಿಶ್ಲೇಷಣಾ ಘಟಕ ಸ್ಥಾಪನೆ, ಸಾವಯವ ಕೃಷಿಗೆ 500 ಕೋಟಿ ರೂಪಾಯಿ ನೀಡಲಾಗುತ್ತದೆ. ಬೆಂಗಳೂರಿನಲ್ಲಿ 3ಕಡೆ ಮೇಲ್ಸೆತುವೆ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಸಿಎಂ ಬಿಎಸ್ ವೈ ಬಜೆಟ್ ನಲ್ಲಿ ಘೋಷಿಸಿದ್ದಾರೆ. …. : , . 08, 2021 (..): 3% . .. 2020-2021. , . 45 . 5% 3%. :• • • .21,477 • • • • .500 • .: , / 2021-2022/ : – - – - .