ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ- ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆ ಶುಭಕೋರಿದ ಸಿಎಂ ಬಿಎಸ್ ವೈ… ಬೆಂಗಳೂರು,ಮಾರ್ಚ್,8,2021(..):ಈ ಬಾರಿ ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ನುಡಿದರು. ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆಯಂದೇ ಬಜೆಟ್ ಮಂಡಿಸುತ್ತಿರುವ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಶಾಸಕಿಯರು ಆರತಿ ಬೆಳಗಿದರು. ನಂತರ ಸಿಎಂ ಬಿಎಸ್ ಯಡಿಯೂರಪ್ಪ ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆಯ ಶುಭಕೋರಿದರು. ನಂತರ ಸಿಎಂ ಅಧಿಕೃತ ನಿವಾಸ ಕಾವೇರಿಯಿಂದ ತೆರಳಿದ ಸಿಎಂ ಬಿಎಸ್ ವೈ ಶೇಷಾದ್ರಿಪುರಂನಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಬಜೆಟ್ ಪ್ರತಿಗೆ ಪೂಜೆ ಸಲ್ಲಿಸಿದರು. ಬಜೆಟ್ ಮಂಡನೆಗೂ ಮುನ್ನ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಿಎಂ ಬಿಎಸ್ ವೈ ಬಜೆಟ್ ಗೆ ಅನುಮೋದನೆ ಪಡೆಯಲಿದ್ದಾರೆ. : – – -