ರಮೇಶ್ ಜಾರಕಿಹೊಳಿ ವಿರುದ್ಧ ಸೆಕ್ಸ್ ಸಿಡಿ ಬಿಡುಗಡೆ ಪ್ರಕರಣ : ದಿನೇಶ್ ಕಲ್ಲಹಳ್ಳಿ ಇದೀಗ ಉಲ್ಟಾ..! ಬೆಂಗಳೂರು,ಮಾರ್ಚ್,07,2021(..) :ರಮೇಶ್ ಜಾರಕಿಹೊಳಿ ವಿರುದ್ಧ ಸೆಕ್ಸ್ ಸಿಡಿ ಬಿಡುಗಡೆ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ಉಲ್ಟಾ ಹೊಡೆದಿದ್ದು, ಕೇಸ್ ವಾಪಸ್ ಪಡೆಯಲು ಮುಂದಾಗಿದ್ದಾರೆ. ಮಾರ್ಚ್ 2 ರಂದು ರಮೇಶ್ ಜಾರಕಿಹೊಳಿ ವಿರುದ್ಧ ಸೆಕ್ಸ್ ಸಿಡಿ ಬಿಡುಗಡೆ ಮಾಡಿ, ಕಬ್ಬನ್ ಪಾರ್ಕ್ ಠಾಣೆಯಲ್ಲಿ ಕಲ್ಲಹಳ್ಳಿ ದೂರು ದಾಖಲಿಸಿ ತನಿಖೆಗೆ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ದಿನೇಶ್ ಕಲ್ಲಹಳ್ಳಿ ಏಕಾಏಕಿ ತಮ್ಮ ದೂರು ವಾಪಸ್ ಪಡೆಯಲು ಮುಂದಾಗಿದ್ದು, ಸಚಿವರ ಸಲಹೆ ಮೇರೆಗೆ ದೂರು ವಾಪಸ್ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. : ----- - - ..!