ಸಚಿವರು ಕೋರ್ಟ್ ಮೊರೆ ಹೋದ ವಿಚಾರ: ಅದು ಅವರ ವೈಯಕ್ತಿಕ ಎಂದ ಕೇಂದ್ರ ಸಚಿವ ಡಿವಿ ಸದಾನಂದ ಗೌಡ… ಬೆಂಗಳೂರು,ಮಾರ್ಚ್,6,2021(..):ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಹಿರಂಗವಾಗಿ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಈ ಮಧ್ಯೆ ತಮ್ಮ ವಿರುದ್ಧ ಯಾವುದೇ ರೀತಿ ಅವಹೇಳನಕಾರಿ ಮತ್ತು ಮಾನಹಾನಿಗೆ ಸಂಬಂಧಿಸಿದಂತೆ ಯಾವುದೇ ವರದಿ ಪ್ರಸಾರ ಮಾಡದಂತೆ ಕೋರಿ 6 ಮಂದಿ ಸಚಿವರು ಕೋರ್ಟ್ ಮೊರೆ ಹೋಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಸದಾನಂದಗೌಡರು, ಕೋರ್ಟ್ ಗೆ ಹೋಗಿದ್ದ ವಿಚಾರದಲ್ಲಿ ನಾನು ಮಧ್ಯ ಪ್ರವೇಶಿಸಲ್ಲ. ಕೋರ್ಟ್ ಗೆ ಹೋಗಿದ್ದು ಅವರ ವೈಯಕ್ತಿಕ ವಿಚಾರ. ಆದರೆ ಅನಾವಶ್ಯಕವಾಗಿ ಕೋರ್ಟ್ ಮೊರೆಹೋಗಿದ್ದು ಸರಿಯಲ್ಲ. ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಭವಿಷ್ಯದ ಬಗ್ಗೆ ಚಿಂತನೆ ಇರುತ್ತೆ. ಅದನ್ನನೋಡಿಕೊಂಡು ಮುಂದಿನ ಹೆಜ್ಜೆ ಇಡುತ್ತಾರೆ ಎಂದರು. ರಮೇಶ್ ಜಾರಕಿಹೊಳಿ ಸಿಡಿ ವಿಚಾರ ಪಕ್ಷಕ್ಕೆ ಮುಜುಗರ.ಟೆಕ್ನಾಲಜಿ ಈಗ ಬಹಳ ಬೆಳೆದಿದೆ. ಯಾರು ಏನು ಬೇಕಾದರೂ ಮಾಡಬಹುದು. ತನಿಖೆ ನಡೆಯುತ್ತಿದೆ. ಸತ್ಯಾಂಶ ಹೊರಬರಲಿ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ತಿಳಿಸಿದರು. : – - - – .