ದೆಹಲಿಗೆ ಬರುವಂತೆ ಸಚಿವ ಅರವಿಂದ ಲಿಂಬಾವಳಿಗೆ ಹೈಕಮಾಂಡ್ ಬುಲಾವ್…. ಬೆಂಗಳೂರು,ಮಾರ್ಚ್,5,2021(..):ದೆಹಲಿಗೆ ಬರುವಂತೆ ಅರಣ್ಯ ಸಚಿವ ಅರವಿಂದ ಲಿಂಬಾವಳಿಗೆ ಪಕ್ಷದ ಹೈಕಮಾಂಡ್ ಬುಲಾವ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಅರವಿಂದ ಲಿಂಬಾವಳಿ ಸದ್ಯ ಕಲ್ಬುರ್ಗಿ ಜಿಲ್ಲೆಯ ಪ್ರವಾಸದಲ್ಲಿದ್ದಾರೆ. ಈ ನಡುವೆ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಕಲ್ಬುರ್ಗಿ ಪ್ರವಾಸ ಮೊಟಕುಗೊಳಿಸಿ ನಾಳೆ ಅರವಿಂದ ಲಿಂಬಾವಳಿ ದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಇನ್ನು ಪಶ್ಚಿಮ ಬಂಗಾಳ ಸೇರಿ ಐದು ರಾಜ್ಯಗಳಿಗೆ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಪಕ್ಷದಲ್ಲಿ ಚುನಾವಣಾ ತಯಾರಿ ನಡೆಸಲಾಗುತ್ತಿದೆ. ಈ ಮಧ್ಯೆ ಸಚಿವ ಅರವಿಂದ ಲಿಂಬಾವಳಿಗೆ ಪಶ್ಚಿಮ ಬಂಗಾಳ ಚುನಾವಣೆ ಹೊಣೆ ನೀಡಲಾಗುತ್ತದೆಯೇ ಎಂಬ ಕುತೂಹಲ ಉಂಟಾಗಿದೆ. : - - - - .