ಮಾಜಿ ಸಿಎಂ ಎಸ್ ಎಂ ಕೃಷ್ಣ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ. ಬೆಂಗಳೂರು,ಮೇ,13,2024 (..):ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರು ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಸ್ ಎಂ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಡಾ.ಸತ್ಯನಾರಾಯಣ ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡದಿಂದ ಚಿಕಿತ್ಸೆ. ನೀಡಲಾಗುತ್ತಿದೆ. ಇದೀಗ ಮಣಿಪಾಲ್ ಆಸ್ಪತ್ರೆಯು ಎಸ್ ಎಂ ಕೃಷ್ಣ ಅವರ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದೆ. ಹಾಗೆಯೇ ಎಸ್ ಎಂ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. : , ,