ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ಬಿಜೆಪಿ ಶಾಸಕರು. ಬೆಂಗಳೂರು,ಮೇ,13,2024 (..):ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಬಿಜೆಪಿ ಶಾಸಕರಾದ ಶಿವರಾಂ ಹೆಬ್ಬಾರ್ ಮತ್ತು ಎಸ್.ಟಿ ಸೋಮಶೇಖರ್ ಭೇಟಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದಾಶಿವ ನಗರದಲ್ಲಿನ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್, ಎಸ್ ಟಿ ಸೋಮಶೇಖರ್ ಅವರು ಇಂದು ಭೇಟಿ ನೀಡಿ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಶಾಸಕ ಶಿವರಾಂ ಹೆಬ್ಬಾರ್ ಜೊತೆಗೆ ಮಾಲೀಕಯ್ಯ ಗುತ್ತೇದಾರ್, ಶಾಸಕ ಗಣೇಶ್ ಅವರೂ ಸಹ ಭೇಟಿ ನೀಡಿದ್ದಾರೆ ಎನ್ನಲಾಗಿದೆ. : , , ,