ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ಡೀಲ್- ಹೊಸಬಾಂಬ್ ಸಿಡಿಸಿದ ಹೆಚ್.ಡಿ ಕುಮಾರಸ್ವಾಮಿ… ಮೈಸೂರು,ಮಾರ್ಚ್,5,2021(..):ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ಡೀಲ್ ನಡೆದಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೊಸಬಾಂಬ್ ಸಿಡಿಸಿದ್ದಾರೆ. ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ರಮೇಶ್ ಜಾರಕಿಹೊಳಿ ಸಿಡಿ 5 ಕೋಟಿಗೆ ಡೀಲ್ ಆಗಿದೆ. ಕಳೆದ ಮೂರು ತಿಂಗಳಿಂದಲೂ ಈ ಸೆಕ್ಸ್ ಸಿಡಿ ಡೀಲ್ ನಡೆದಿದೆ. ದೊಡ್ಡ ದೊಡ್ಡವರೇ ಈ ಸೆಕ್ಸ್ ಸಿಡಿ ಡೀಲ್ ನಲ್ಲಿ ಇದ್ದಾರೆ. ಈ ಪ್ರಕರಣ ತನಿಖೆ ನಡೆಸುವ ಜವಾಬ್ದಾರಿ ಸರ್ಕಾರದ್ದು ಎಂದು ಹೇಳಿದರು. ಹಾಗೆಯೇ ನಾನು ಈ ಪ್ರಕರಣವನ್ನ ನೋಡಿ ಖುಷಿ ಪಡುವವನಲ್ಲ. ನಾನು ಒಂದು ಕಲ್ಲು ಹೊಡೆಯವಂತಹ ವ್ಯಕ್ತಿಯಲ್ಲ. ಸಿಡಿ ವಿಚಾರದಲ್ಲಿ ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ಅವರ ಬಳಿ ಇರುವ ಸಿಡಿಗಳನ್ನ ಸರ್ಕಾರವೇ ವಶಕ್ಕೆ ಪಡೆದು ಬಿಡುಗಡೆ ಮಾಡಲಿ ಎಂದು ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದರು. … .5 : , . 05, 2021 (..): .. .5 ’ . . 5 . “ . ,” .“ . ’ . . ,” .: . . / / / . 5 : 5 - - - –-