ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಮುನಿರಾಜುಗೌಡ ನಾಮಪತ್ರ ಸಲ್ಲಿಕೆ… ಬೆಂಗಳೂರು,ಮಾರ್ಚ್,4,2021(..): ಕರ್ನಾಟಕ ವಿಧಾನಪರಿಷತ್ತಿನ ಒಂದು ಸ್ಥಾನಕ್ಕಾಗಿ ಮಾರ್ಚ್ 15ರಂದು ನಡೆಯಲಿರುವ ಚುನಾವಣೆಗೆ ಆಡಳಿತ ಪಕ್ಷ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬೆಂಗಳೂರಿನ ಮುನಿರಾಜುಗೌಡ ಪಿ.ಎಂ. ಅವರು ಇಂದು ನಾಮಪತ್ರ ಸಲ್ಲಿಸಿದರು. ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು. : - - – -