ಕುದುರೆ ರೇಸ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಮೂವರ ಬಂಧನ… ಬೆಂಗಳೂರು, ಮಾರ್ಚ್,4,2021(.,): ಕುದುರೆ ರೇಸ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಮೂವರನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವರುಣ್, ನಂದೀಶ್, ಜೀವನ್ ಬಂಧಿತ ಆರೋಪಿಗಳು. ಬಂಧಿತರು ಚಂದ್ರಾ ಲೇಔಟ್ ಮನೆಯೊಂದರಲ್ಲಿ ಕುದುರೆ ರೇಸ್ ಬೆಟ್ಟಿಂಗ್ ನಲ್ಲಿ ತೊಡಗಿದ್ದರು. ಈ ವೇಳೆ ಪೊಲೀಸರು ದಾಳಿ ನಡೆಸಿ ಮೂವರನ್ನ ಬಂಧಿಸಿದ್ದಾರೆ. ಬಂಧಿತರಿಂದ 1.90 ಲಕ್ಷ ನಗದು, ಮೂರು ಮೊಬೈಲ್ ಗಳನ್ನ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - – - -