ಮೈಸೂರಿನಲ್ಲಿ ನಾಳೆ ‘ಪೊಲೀಸ್ ಸಬ್ ಇನ್ಸ್ ಪೆಕ್ಟರ್ ದೈಹಿಕ ಪರೀಕ್ಷಾ ತರಬೇತಿ’… ಮೈಸೂರು,ಮಾರ್ಚ್,04,2021(..) :ಜ್ಞಾನಬುತ್ತಿ ವತಿಯಿಂದ ಮಾರ್ಚ್ 05ರಂದು ಮೈಸೂರು ವಿವಿ ಸ್ಪೋರ್ಟ್ಸ್ ಪೆವಿಲಿಯನ್ ಆವರಣದಲ್ಲಿ 2021ರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ದೈಹಿಕ ಪರೀಕ್ಷಾ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 6.30ಕ್ಕೆ ಕಾರ್ಯಕ್ರಮವನ್ನು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟಿಸಲಿದ್ದಾರೆ. ಮೈಸೂರು ಪೊಲೀಸ್ ಉಪ ಆಯುಕ್ತ ಡಾ.ಎ.ಎನ್.ಪ್ರಕಾಶ್ ಗೌಡ ಶುಭಹಾರೈಸಲಿದ್ದಾರೆ. ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗ ನಿರ್ದೇಶಕ ಡಾ.ಪಿ.ಕೃಷ್ಣಯ್ಯ ಉಪಸ್ಥಿತರಿರಲಿದ್ದಾರೆ. : -- ---