ರಾಸಲೀಲೆ ವಿಡಿಯೋ ಬಹಿರಂಗ ಪ್ರಕರಣ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ….. ಬೆಂಗಳೂರು,ಮಾರ್ಚ್,3,2021(..):ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿ ತಲೆದಂಡವಾಗಿದೆ. ಹೌದು, ನೈತಿಕ ಹೊಣೆಹೊತ್ತು ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಕೆಲಸದ ಆಮಿಷವೊಡ್ಡಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿ ಬಂದಿದ್ದು ರಾಸಲೀಲೆ ವಿಡಿಯೋ ನಿನ್ನೆ ರಿಲೀಸ್ ಆಗಿತ್ತು. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬವರು ರಮೇಶ್ ಜಾರಕಿಹೊಳಿ ಹಾಗೂ ಯುವತಿಯೊಂದಿಗಿದ್ದ ವಿಡಿಯೋ ಹಾಗೂ ಅವರುಗಳು ಮಾತನಾಡಿರುವ ಆಡಿಯೋದೊಂದಿಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅಲ್ಲದೆ ಈ ವಿಚಾರ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಈ ವಿಚಾರ ಬಹಿರಂಗವಾಗುತ್ತಿದ್ದಂತೆ ವಿಪಕ್ಷಗಳು ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿದ್ದವು. ಇದೀಗ ಸಿಎಂ ಬಿಎಸ್ ಯಡಿಯೂರಪ್ಪಗೆ ರಮೇಶ್ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಪತ್ರ ರವಾನಿಸಿದ್ದಾರೆ. ಇನ್ನು ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜೀನಾಮೆ ನೀಡಿದ್ದೇನೆ ಆರೋಪಮುಕ್ತರಾದ ಬಳಿಕ ಸಚಿವ ಸ್ಥಾನ ನೀಡಿ ಎಂದು ಪತ್ರದಲ್ಲಿ ರಮೇಶ್ ಜಾರಕಿಹೊಳಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. … : , . 03, 2021 (..): . . . , . .: / / / / : - –- - – -