ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು ಈ ಕಾರಣಕ್ಕೆ… ಬೆಂಗಳೂರು,ಮಾರ್ಚ್,3,2021(..):ರಾಸಲೀಲೆ ಸಿಡಿ ಬಿಡುಗಡೆಯಾದ ಹಿನ್ನೆಲೆ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು ಸಿಎಂ ಬಿಎಸ್ ಯಡಿಯೂರಪ್ಪ ರಾಜೀನಾಮೆ ಅಂಗೀಕಾರವಾಗಿದೆ. ಕೆಲಸದ ಆಮಿಷವೊಡ್ಡಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪ ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿ ಬಂದಿದ್ದು ರಾಸಲೀಲೆ ವಿಡಿಯೋ ನಿನ್ನೆ ರಿಲೀಸ್ ಆಗಿತ್ತು. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬವರು ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಈ ರೀತಿ ಕಾರಣ ನೀಡಿದ್ದಾರೆ. ನನ್ನ ಮೇಲೆ ಬಂದಿರುವ ಆರೋಪಗಳು ಸತ್ಯಕ್ಕೆ ದೂರವಾದದ್ದು, ಇದರ ಬಗ್ಗೆ ಶೀಘ್ರದಲ್ಲೇ ತನಿಖೆಯಾಗಬೇಕು. ನಾನು ನಿರ್ದೋಷಿಯಾಗುವ ವಿಶ್ವಾಸವಿದ್ದರೂ ನೈತಿಕ ಹೊಣೆಹೊತ್ತು ನನ್ನ ಸಚಿವ ಸಂಪುಟ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ಇದನ್ನ ಅಂಗೀಕರಿಸಬೇಕು ಎಂದು ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ. : - –-