ಸಚಿವ ರಮೇಶ್ ಜಾರಕಿಹೊಳಿ ‘ರಾಸಲೀಲೆ’ ಬಾಂಬ್ : ತನಿಖೆಗೆ ಆಗ್ರಹಿಸಿ ದಿನೇಶ್ ಕಲ್ಲಹಳ್ಳಿ ದೂರು… ಬೆಂಗಳೂರು,ಮಾರ್ಚ್,2,2021(..):ರಾಜ್ಯ ರಾಜಕಾರಣದಲ್ಲಿ ಮತ್ತೊಂದು ರಾಸಲೀಲೆ ಸಿಡಿ ಬಾಂಬ್ ಸ್ಪೋಟಗೊಂಡಿದೆ. ಹೌದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ದೃಶ್ಯ ಬಹಿರಂಗವಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ನಾಗರಿಕ ಹಕ್ಕು ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಗೆ ದೂರು ನೀಡಲು ಮುಂದಾಗಿದ್ದಾರೆ. ಈ ಬಗ್ಗೆ ಮಾದ್ಯಮಗಳಿಗೆ ಪ್ರತಿಕ್ರಿಯಿಸಿರುವ ದಿನೇಶ್ ಕಲ್ಲಹಳ್ಳಿ, ಪ್ರಭಾವಿ ಸಚಿವರೊಬ್ಬರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗುತ್ತದೆ. ಸಂತ್ರಸ್ತೆಯ ಕುಟುಂಬಸ್ಥರು ನನಗೆ ಅಪ್ರೋಚ್ ಮಾಡಿದ್ದು ಈ ಹಿನ್ನೆಲೆಯಲ್ಲಿ ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಪೊಲೀಸ್ ಆಯುಕ್ತರಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ. ಇನ್ನು ಸಂತ್ರಸ್ತೆ ಮಹಿಳೆ ನನ್ನನ್ನ ಸಂಪರ್ಕಿಸಿ ಆದ ನೋವನ್ನ ನನ್ನ ಬಳಿ ತೋಡಿಕೊಂಡಿದ್ದಾರೆ. ಹೀಗಾಗಿ ಅವರ ಪರ ನಾನು ಕಮಿಷನರ್ ಭೇಟಿ ಮಾಡಿ ದೂರು ನೀಡುತ್ತಿದ್ದೇನೆ. ಇನ್ನು ಸಂತ್ರಸ್ತ ಮಹಿಳೆಯ ಹೆಸರನ್ನ ಬಹಿರಂಗಪಡಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ. : - - -