ಕೋವಿಡ್ ವ್ಯಾಕ್ಸಿನ್ ಪಡೆದ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಬೆಂಗಳೂರು, ಮಾರ್ಚ್ 03, 2021 (..): ಟೀಂ ಇಂಡಿಯಾ ಕ್ರಿಕೆಟ್ ತಂಡದ ಕೋಚ್ ರವಿಶಾಸ್ತ್ರಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಅಹಮದಾಬಾದ್ ನ ಅಪೋಲೋ ಆಸ್ಪತ್ರೆಯಲ್ಲಿ ರವಿಶಾಸ್ತ್ರಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಮೊದಲ ಡೋಸ್ ಹಾಕಿಸಿಕೊಳ್ಳುತ್ತಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. ಕೋವಿಡ್ -19 ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದ್ದೇನೆ. ಸಾಂಕ್ರಾಮಿಕ ರೋಗದ ವಿರುದ್ಧ ಭಾರತವನ್ನು ಸಶಕ್ತಗೊಳಿಸಿದ ವೈದ್ಯರು ಮತ್ತು ವಿಜ್ಞಾನಿಗಳಿಗೆ ಧನ್ಯವಾದಗಳು ಎಂದು ಟೀಂ ಇಂಡಿಯಾ ಕೋಚ್ ಹೇಳಿದ್ದಾರೆ. ವಿಜ್ಞಾನಿಗಳು ಹಾಗೂ ವೈದ್ಯಕೀಯ ತಂಡದ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.