ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೋ, ಮೋದಿ ಮತ್ತೆ ಪ್ರಧಾನಿಯಾಗೋದು ಅಷ್ಟೇ ಸತ್ಯ- ಬಿಎಸ್ ವೈ. ಮೈಸೂರು,ಮೇ,11,2024 (..):ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರು 400ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಪ್ರಧಾನಿಯಾಗುತ್ತಾರೆ. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೋ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗೋದು ಅಷ್ಟೇ ಸತ್ಯ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನುಡಿದರು. ಇಂದು ಮೈಸೂರಿನಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಮೋದಿಯವರು ಈಗಲೇ ಚಿಂತೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ಕನಿಷ್ಠ 24-25 ಸ್ಥಾನ‌ ಗೆಲ್ಲುತ್ತೇವೆ. ಕಾಂಗ್ರೆಸ್ ನವರು ಏನೇ ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್ ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಬಹುದು. ಆದರೆ ಮೋದಿಯವರು ಪ್ರಧಾನಿಯಾಗಬೇಕು ಎಂಬುದು ಎಲ್ಲರ ಅಭಿಪ್ರಾಯ ಎಂದು ಹೇಳಿದರು. ರಾಜ್ಯ ಸರ್ಕಾರ ಸಾಲಮನ್ನ ಮಾಡಿ ರೈತರಿಗೆ ನೆರವಾಗಬೇಕು. ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕೆರೆಕಟ್ಟೆ ಬತ್ತಿಹೋಗಿದೆ. ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲಮನ್ನ ಮಾಡಿ ರೈತರಿಗೆ ನೆರವಾಗಬೇಕು. ಸಾಲಮನ್ನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದು ಬಿಎಸ್ ವೈ ಆಗ್ರಹಿಸಿದರು. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಸಂಬಂಧ ಪಾರದರ್ಶಕವಾಗಿ ತನಿಖೆ ನಡೆಯಬೇಕಿದ್ದರೇ ಸಿಬಿಐಗೆ ಕೊಡಬೇಕು. ಬಹುತೇಕ ಜನರ ಅಭಿಪ್ರಾಯ ಇದೇ ಆಗಿದೆ. ಸಿಎಂ ಅಭಿಪ್ರಾಯ ಅವರ ವೈಯಕ್ತಿಕ ಅಭಿಪ್ರಾಯ. ಪ್ರಕರಣವನ್ನ ಸಿಬಿಐ ತನಿಖೆ ವಹಿಸಬೇಕು ಎಂದು ಬಿಎಸ್ ವೈ ಒತ್ತಾಯಿಸಿದರು. : , , , ,