ಬಿಬಿಎಂಪಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ದಾಖಲೆ ಪರಿಶೀಲನೆ…. ಬೆಂಗಳೂರು,ಮಾರ್ಚ್,2,2021(..):ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಎಸಿಬಿ ಶಾಕ್ ನೀಡಿದ್ದು ಬಿಬಿಎಂಪಿ ಅಧಿಕಾರಿ ದೇವೇಂದ್ರಪ್ಪ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಬಿಎಂಪಿ ಸಹಾಯಕ ಇಂಜಿನಿಯರ್ ಆಗಿರುವ ದೇವೇಂದ್ರಪ್ಪ ಕಟ್ಟಡ ಕಾಮಗಾರಿಗೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ನಡುವೆ 20 ಲಕ್ಷ ರೂ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಮೃತನಗರದಲ್ಲಿರುವ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ದೇವೇಂದ್ರಪ್ಪ ಅವರ ಆಪ್ತ ಶ್ರೀನಿವಾಸ್ ಮನೆ ಮೇಲೂ ಎಸಿಬಿ ದಾಳಿ ನಡೆದಿದೆ ಎನ್ನಲಾಗಿದೆ. : - – - -