ಕಾಲೇಜಿನಲ್ಲಿ ವಿದ್ಯುತ್ ಅವಘಡ…. ಮೈಸೂರು,ಮಾ,1,2021(..): ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಲಕ್ಷ್ಮೀಪುರಂನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಅತಿಯಾದ ವಿದ್ಯುತ್ ಪ್ರವಹಿಸಿದ ಪರಿಣಾಮ ಮೀಟರ್ ಬೋರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವಿದ್ಯುತ್ ಅವಘಡದಿಂದಾಗಿ ವಿದ್ಯುತ್ ವೈರಿಂಗ್ ಸುಟ್ಟು ಭಸ್ಮವಾಗಿದೆ. ಸದ್ಯ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಈ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷ್ಮೀಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. : – --.