ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಸಾವು…. ಬೆಳಗಾವಿ,ಮಾರ್ಚ್,1,2021(..): ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಹುಕ್ಕೇರಿ ತಾಲ್ಲೂಕಿನ ಬಿರನೊಳ್ಳಿ ಗ್ರಾಮದಲ್ಲಿ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಯಲ್ಲಪ್ಪ(27), ಹಾಲಪ್ಪ(24) ಮೃತಪಟ್ಟ ಕಾರ್ಮಿಕರು. ಮಣ್ಣು ಅಗೆಯುವ ಕೆಲಸ ಮಾಡುತ್ತಿದ್ದ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - – - -