ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ ಅಂತಾ ಅನ್ನಿಸುತ್ತಿದೆ- ಬೆಂಗಳೂರಿನಲ್ಲಿ ಶಾಸಕ ತನ್ವೀರ್ ಸೇಠ್ ಹೇಳಿಕೆ… ಬೆಂಗಳೂರು,ಮಾರ್ಚ್,1,2021(..):ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ ಅಂತಾ ಅನ್ನಿಸುತ್ತಿದೆ ಒಂದಂತೂ ಸತ್ಯ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ತಿಳಿಸಿದರು. ಮೈಸೂರು ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ವರದಿ ಸಿದ್ಧಪಡಿಸಿರುವ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ವರದಿಯನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ನೀಡಲು ಬೆಂಗಳೂರಿಗೆ ತೆರಳಿದ್ದಾರೆ. ಆದರೆ ಡಿ.ಕೆ ಶಿವಕುಮಾರ್ ಕೋಲಾರದಲ್ಲಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ತನ್ವೀರ್ ಸೇಠ್, ಇಂದು ಡಿಕೆ ಶಿವಕುಮಾರ್ ಸಿಗದಿದ್ದರೇ ಮುಂದಿನ ದಿನಾಂಕ ಸೂಚಿಸಿದರೇ ಅಂದು ಮತ್ತೆ ಬರುತ್ತೇನೆ. ಪಕ್ಷ ನೀಡಿದ ಕೆಲಸವನ್ನ ಪ್ರಾಮಾಣಿಕವಾಗಿ ಮಾಡಿದ್ದೇನೆ. ನನ್ನನ್ನ ಟಾರ್ಗೆಟ್ ಮಾಡಿದಂತೆ ಅನ್ನಿಸುತ್ತಿದೆ. ಇಡೀ ಘಟನೆ ಹೇಗೆ ಗ್ರಹಿಸುತ್ತಾರೋ ಗೊತ್ತಿಲ್ಲ. ಒಂದಂತೂ ಸತ್ಯ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದರು. ಇನ್ನು ನಾವು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಳ್ಳುತ್ತೇನೆ ಎಂದರು. …. , 1, 2021 (..): . “ .” .. , . , “ . . . ’ . .”: / .. / / / ——————————— : - - -- - -