ಡೆತ್ ನೋಟ್ ಬರೆದಿಟ್ಟು ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ… ಬೆಂಗಳೂರು,ಮಾರ್ಚ್,1,2021(..):ಡೆತ್ ನೋಟ್ ಬರೆದಿಟ್ಟು ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ವಿವಿ ಪುರಂ ನಲ್ಲಿರುವ ಬಿಐಟಿ ಕಾಲೇಜಿನಲ್ಲೇ ಈ ಘಟನೆ ನಡೆದಿರುವುದು. ಜಯಂತ್ ರೆಡ್ಡಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಡೆತ್ ನೋಟ್ ಬರೆದಿಟ್ಟು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿ ತೀವ್ರ ಗಾಯಗೊಂಡಿದ್ಧ ವಿದ್ಯಾರ್ಥಿ ಜಯಂತ್ ರೆಡ್ಡಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಜಯಂತ್ ರೆಡ್ಡಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ವಿವಿ ಪುರಂ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. : - – – – -