ಕೇರಳ ರಾಜ್ಯದ ಜನರು ಈ ಬಾರಿ ಬದಲಾವಣೆ ಬಯಸುತ್ತಿದ್ದಾರೆ : ಡಿಸಿಎಂ ಸಿ.ಎನ್.‌ಅಶ್ವತ್ಥನಾರಾಯಣ ಬೆಂಗಳೂರು,ಫೆಬ್ರವರಿ,28,2021(..) :ಕೇರಳದಲ್ಲಿ ಕಮ್ಯುನಿಸ್ಟ್‌ ಪಕ್ಷಗಳ ನೇತೃತ್ವದ ಎಲ್‌ಡಿಎಫ್‌ ಹಾಗೂ ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಭಾರತೀಯ ರಾಜಕಾರಣದಲ್ಲಿ ಅಪ್ರಸ್ತುತವಾಗಿವೆ. ಆ ರಾಜ್ಯದ ಜನರು ಈ ಬಾರಿ ಬದಲಾವಣೆ ಬಯಸುತ್ತಿದ್ದಾರೆಂದು ಕೇರಳ ರಾಜ್ಯದ ಬಿಜೆಪಿ ಸಹ ಪ್ರಭಾರಿ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇರಳದಲ್ಲಿ ಇವೆರಡೂ ರಾಜಕೀಯ ಒಕ್ಕೂಟಗಳು ಸಂಪೂರ್ಣ ವಿಫಲವಾಗಿವೆ. ಕೇವಲ ವೋಟ್‌ಬ್ಯಾಂಕ್‌ ಪಾಲಿಟಿಕ್ಸ್‌ ಮಾಡಿಕೊಂಡು ಕಳೆದ ಎಪ್ಪತ್ತು ವರ್ಷಗಳಿಂದ ಆ ರಾಜ್ಯವನ್ನು ಕತ್ತಲೆಯಲ್ಲೇ ಇಟ್ಟಿವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಒಲವು ವ್ಯಕ್ತವಾಗುತ್ತಿದೆ ಎಂದರು. ಈಗಿನ ಎಲ್‌ಡಿಎಫ್‌ ಸರಕಾರವಂತೂ ರಾಜಕೀಯ ಕಿರುಕುಳ ನೀಡುವುದು, ರಾಜಕೀಯ ಕೊಲೆಗಳು ಹಾಗೂ ಸೇಡಿನ ರಾಜಕೀಯದಲ್ಲಿ ನಿರತವಾಗಿದೆ. ಈ ಎರಡೂ ರಾಜಕೀಯ ಒಕ್ಕೂಟಗಳು ಎಲ್ಲ ಜನರಿಗೂ ಸಲ್ಲುವ ಪಕ್ಷಗಳಲ್ಲ. ಕೇವಲ ಜಾತಿ-ಜಾತಿಗಳ ನಡುವೆ ವೈಷಮ್ಯ ಭಿತ್ತಿ ಆ ಮೂಲಕ ರಾಜಕೀಯ ಲಾಭ ಪಡೆಯುತ್ತಿವೆ ಎಂದು ಟೀಕಿಸಿದರು. ನಮ್ಮ ಭಾರತೀಯ ಸಂಸ್ಕೃತಿ, ಆಚಾರ ವಿಚಾರಕ್ಕೆ ವಿರುದ್ಧವಾಗಿರುವ ಎಲ್‌ಡಿಎಫ್‌ನಿಂದ ಕೇರಳಕ್ಕೆ ತುಂಬಾ ಹಾನಿಯಾಗಿದೆ. ಕಮ್ಯುನಿಸ್ಟ್‌ ಪಕ್ಷಗಳು ನಮ್ಮ ದೇಶದಲ್ಲಿ ಅಪ್ರಸ್ತುತವಾಗಿವೆ. ಎಲ್ಲ ಕಡೆ ಅಧಿಕಾರ ಕಳೆದುಕೊಂಡು ಈ ಕೇರಳದಲ್ಲೂ ನಿರ್ನಾಮದ ಹಂತದಲ್ಲಿದೆ. ಅದೇ ರೀತಿ ಕಾಂಗ್ರೆಸ್‌ ಪಕ್ಷವೂ ದೇಶಾದ್ಯಂತ ಹೇಳ ಹೆಸರಿಲ್ಲದೆ ಹೋಗುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು. : --- --- ..