ಇಂದು ಸಂಜೆ ಬಿಗ್ ಬಾಸ್ ಸೀಸನ್ 8ಕ್ಕೆ ಚಾಲನೆ: ಬಿಗ್ ಬಾಸ್ ಮನೆಗೆ ಬರುವವರ ಲಿಸ್ಟ್ ಇಲ್ಲಿದೆ ನೋಡಿ ! ಬೆಂಗಳೂರು, ಫೆಬ್ರವರಿ 28, 2021 (..):ಇಂದು ಸಂಜೆ ಕನ್ನಡದ ಬಿಗ್ ಬಾಸ್ 8ನೇ ಆವೃತ್ತಿ ಚಾಲನೆ ದೊರೆಯಲಿದೆ. ಯಾರು ಬಿಗ್ ಬಾಸ್ ಮನೆಗೆ ಕಾಲಿಡಲಿದ್ದಾರೆ ಎಂಬ ಕುತೂಹಲಕ್ಕೂ ಉತ್ತರ ಸಿಕ್ಕಿದೆ. ನಟಿ ನಿಧಿ ಸುಬ್ಬಯ್ಯ, ಹಿರಿಯ ನಟ ಶಂಕರ್ ಅಶ್ವಥ್, ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವೈಷ್ಣವಿ, ಬ್ರಹ್ಮಗಂಟು ಧಾರವಾಹಿಯ ನಟಿ ಗೀತಾ ಭಾರತಿ ಭಟ್ ಬಿಗ್ ಬಾಸ್ ಮನೆ ಸೇರಲಿದ್ದಾರೆ. ಹಾಸ್ಯ ಕಲಾವಿದ ಮಂಜುಪಾವಗಡ, ಪಟ್ಟಗೌರಿ ಖ್ಯಾತಿಯ ಚಂದ್ರಕಲಾ ಮೋಹನ್, ಹಾಡು ಕರ್ನಾಟಕ ಫೇಮ್ ವಿಶ್ವನಾಥ್ ಹಾವೇರಿ, ನಾಯಕ ಸುನಿಲ್ ರಾವ್ ಮತ್ತು ಓರ್ವ ಬೈಕ್ ರೈಡರ್ ಕೂಡ ಬಿಗ್ ಬಾಸ್ ಪಟ್ಟಕ್ಕಾಗಿ ‘ಫೈಟ್’ ಮಾಡಲಿದ್ದಾರೆ. ಇಂದು ಸಂಜೆ 6 ಗಂಟೆಯಿಂದ ರಾತ್ರಿ 11ರವರೆಗೆ ಬಿಗ್‍ಬಾಸ್ ಕಾರ್ಯಕ್ರಮದ ಗ್ರ್ಯಾಂಡ್ ಒಪನಿಂಗ್ ನಡೆಯಲಿದೆ.