ಜನರ ನಿರೀಕ್ಷೆಗೆ ತಕ್ಕಂತೆ ಒಳ್ಳೆಯ ಬಜೆಟ್ ಮಂಡಿಸುತ್ತೇನೆ – ಸಿಎಂ ಬಿಎಸ್ ಯಡಿಯೂರಪ್ಪ…. ಬೆಂಗಳೂರು,ಫೆಬ್ರವರಿ,27,2021(..):ರಾಜ್ಯ ಬಜೆಟ್ ಮಂಡನೆಗೆ ಸಿಎಂ ಬಿಎಸ್ ಯಡಿಯೂರಪ್ಪ ಪೂರ್ವಸಿದ್ಧತೆ ನಡೆಸುತ್ತಿದ್ದು ಎಲ್ಲಾ ಇಲಾಖೆ ಅಧಿಕಾರಿಗಳ ಜತೆ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ಇನ್ನು ಬಜೆಟ್ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಈ ಬಾರಿ ಉತ್ತಮ ಬಜೆಟ್ ಮಂಡಿಸುತ್ತೇನೆ. ಜನರ ನಿರೀಕ್ಷೆಗೆ ತಕ್ಕಂತೆ ಒಳ್ಳೆಯ ಬಜೆಟ್ ಮಂಡಿಸುತ್ತೇನೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ. ರಾಜ್ಯದ ಜನರು ನೆಮ್ಮದಿಯಿಂದ ಬದುಕುವಂತಾಗಬೇಕು. ಜನರಿಗೆ ಎಲ್ಲಾ ಸವಲತ್ತು ಒದಗಿಸುವುದೇ ನನ್ನ ಗುರಿ ಎಂದು ತಿಳಿಸಿದರು. : – - -- .