ಲಂಚ ಸ್ಚೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಪಿಡಿಒ ಮತ್ತು ಗ್ರಾ.ಪಂ ಸಿಬ್ಬಂದಿ… ಮೈಸೂರು,ಫೆಬ್ರವರಿ,26,2021(..): ನಿವೇಶನ ಖಾತೆ ಬದಲಾವಣೆಗೆ ಹಣದ ಬೇಡಿಕೆ ಇಟ್ಟಿದ್ದ ಪಿಡಿಒ ಮತ್ತು ಗ್ರಾ.ಪಂ ಸಿಬ್ಬಂದಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೆಚ್‌.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾ.ಪಂ ಪಿಡಿಒ ಲೋಕೇಶ್ ಮತ್ತು ಎಸ್‌ಡಿಎ ವೆಂಕಟೇಶ್ ಎಸಿಬಿ ಬಲೆಗೆ ಬಿದ್ದಿದ್ದಾರೆ. 30ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಾದಾಪುರ ಗ್ರಾಮದ ನಿವೇಶನವೊಂದರ ಖಾತೆ ಬದಲಾವಣೆಗೆ ಲಂಚದ ಬೇಡಿಕೆ ಇಟ್ಟಿದ್ದರು. ಮೈಸೂರು ಎಸಿಬಿ ಪೊಲೀಸ್ ಠಾಣೆಯ ಉಪಾಧೀಕ್ಷರಾದ ಪರಶುರಾಮಪ್ಪನವರ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು. ಪಿಡಿಓ 10ಸಾವಿರ ಮುಂಗಡವಾಗಿ ಪಡೆದಿದ್ದರು. ಇನ್ನುಳಿದ 20ಸಾವಿರ ಹಣ ನೀಡುವಂತೆ ನಿವೇಶನ ಮಾಲೀಕರಿಗೆ ಒತ್ತಡ ಹಾಕಿದ್ದರು. ಈ ಸಂಬಂಧ ಎಸಿಬಿಗೆ ದೂರು ನೀಡಿದ ನಿವೇಶನ ಮಾಲೀಕ. ದೂರು ಸ್ವೀಕರಿಸಿದ ಅಧಿಕಾರಿಗಳು ಹಣ ನೀಡುವ ವೇಳೆ ದಾಳಿ ನಡೆಸಿದರು. ಈ ವೇಳೆ ಪಿಡಿಓ ಹಾಗೂ ಗ್ರಾ.ಪಂ ಸಿಬ್ಬಂದಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು. : - - – .