ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಕಂಪ್ಯೂಟರ್‌: ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ -ರೋಟರಿ ಕ್ಲಬ್ ಜತೆ ಒಪ್ಪಂದ… ಬೆಂಗಳೂರು,ಫೆಬ್ರವರಿ,26,2021(..):ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಂಡಿರುವ ‘ಶಿಕ್ಷಣಕ್ಕೆ ಸಹಾಯ’ ದ ( ) ಉಪಕ್ರಮದ ಅಂಗವಾಗಿ ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಡೆಸ್ಕ್‌ಟಾಪ್ ಕಂಪ್ಯೂಟರ್‌ ಗಳನ್ನು ನೀಡುವ ಬಗ್ಗೆ ಮಹತ್ವದ ಒಪ್ಪಂದ ಏರ್ಪಟ್ಟಿದೆ. ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ್ ಅವರ ಪರಿಕಲ್ಪನೆಯಂತೆ ಈ ಒಪ್ಪಂದ ಆಗಿದ್ದು, ನಗರ- ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ನಡುವೆ ಡಿಜಿಟಲ್‌ ಅಂತರವನ್ನು ಆಳಿಸಿಹಾಕಲು ಈ ಉಪಕ್ರಮ ಪೂರಕವಾಗಲಿದೆ. ಈ ಕುರಿತು ತಿಳುವಳಿಕೆ ಪತ್ರಕ್ಕೆ ಶುಕ್ರವಾರ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಸಮಕ್ಷಮದಲ್ಲಿ ಸಹಿ ಹಾಕಲಾಗಿದ್ದು, ಇದರಲ್ಲಿ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ (ಡಿಸಿಟಿಇ), ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ರೋಟರಿ ಕ್ಲಬ್ ವೈಟ್‌ಫೀಲ್ಡ್ ಸೆಂಟ್ರಲ್ (ಜಿಲ್ಲೆ 1390) ವತಿಯಿಂದ ಸಹಿ ಬಿದ್ದಿದೆ. ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಮತ್ತು ಕಾಗ್ನಿಜಂಟ್ ಬೆಂಗಳೂರು ಕೇಂದ್ರದ ಮುಖ್ಯಸ್ಥ ನವೀನ್ ರಾವ್ ಅವರು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಒಪ್ಪಂದ ಪತ್ರಗಳನ್ನು ವಿನಿಮಯ ಮಾಡಿಕೊಂಡರು. ಈ ಕಾರ್ಯಕ್ರಮದಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವಂತೆ ಮತ್ತು ವಿದ್ಯಾರ್ಥಿಗಳ ಕಲಿಕೆಯಲ್ಲಿ ವ್ಯತ್ಯಾಸವನ್ನುಂಟು ಮಾಡುವ ಪ್ರಮುಖ ಉದ್ದೇಶವನ್ನು ಹೊಂದಿದೆ, ಅವರಲ್ಲಿ ಹೆಚ್ಚಿನವರು ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು ಒಪ್ಪಂದಕ್ಕೆ ಅಂಕಿತ ಬಿದ್ದ ನಂತರ ತಿಳಿಸಿದರು. ಶಿಕ್ಷಣದಲ್ಲಿ ಮಹತ್ವದ ಬದಲಾವಣೆ: “ಶಿಕ್ಷಣಕ್ಕೆ ಸಹಾಯ” ಮಾಡುವ ಈ ಕಾರ್ಯಕ್ರಮದ ಅಡಿಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಕಾರ್ಪೊರೇಟ್ ಕಂಪನಿಗಳು ಮತ್ತು ದಾನಿಗಳ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಕಲಿಕೆ ಬಗ್ಗೆ ತರಬೇತಿ ನೀಡಲಾಗುವುದು. ಬೋಧಕ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮಗಳು, ಡಿಜಿಟಲ್ ಬೋಧನೆಯ ಮೂಲಕ ಆಧುನಿಕ ವಿಧಾನದಲ್ಲಿ ಪ್ರಾಧ್ಯಾಪಕರು ಅಪ್‌ಗ್ರೇಡ್‌ ಆಗಲು ಇದರಿಂದ ಸಾಧ್ಯವಿದೆ. ಜತೆಗೆ, ಡಿಜಿಟಲ್ ಕಲಿಕೆ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಸರಕಾರಿ ಕಾಲೇಜುಗಳನ್ನು ಸಜ್ಜುಗೊಳಿಸುವ ಅಂಶವೂ ಇದರಲ್ಲಿ ಸೇರಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು. 30,000 ಕಂಪ್ಯೂಟರ್‌ಗಳ ಅಗತ್ಯ: ಸರಕಾರಿ ಕಾಲೇಜುಗಳಿಗೆ ಸುಮಾರು 30,000 ಕಂಪ್ಯೂಟರ್‌ ಗಳು ಅಗತ್ಯ ಇದ್ದು, ಆ ಪೈಕಿ ಈಗ 12,500 ಕಂಪ್ಯೂಟರ್‌ಗಳನ್ನು ಒದಗಿಸಲಾಗಿದೆ. ಸುಮಾರು 50 ಕೋಟಿ ರೂ.ಗಳ ಯೋಜನೆ ಇದಾಗಿದ್ದು, ವಿದ್ಯಾರ್ಥಿಗಳನ್ನು ಆಧುನಿಕ ಕಲಿಕೆಯತ್ತ ಕರೆದೊಯ್ಯಲು, ಡಿಜಿಟಲ್ ತಾರತಮ್ಯವನ್ನು ನಿವಾರಿಸುವ ಈ ಉದಾತ್ತ ಉದ್ದೇಶಕ್ಕೆ ಖಾಸಗಿ ಸಂಘ ಸಂಸ್ಥೆಗಳು ಸರಕಾರದ ಜತೆ ಕೈಜೋಡಿಸುತ್ತಿರುವುದು ಸಂತೋಷ ಉಂಟು ಮಾಡಿದೆ. ಇನ್ನೂ ಅನೇಕ ದಾನಿಗಳು ಶಿಕ್ಷಣಕ್ಕೆ ಸಹಾಯ ಮಾಡಲು ಮುಂದೆ ಬಂದಿದ್ದಾರೆ ಎಂದರು. ಈ ಉದಾತ್ತ ಕಾರ್ಯಕ್ರಮದ ಅಡಿಯಲ್ಲಿ ಕಾಗ್ನಿಜೆಂಟ್ ಇಂಡಿಯಾ ಪ್ರೈ. ಲಿಮಿಟೆಡ್ ಇಲಾಖೆಗೆ 12,500 ಡಿ-ಬಾಂಡೆಡ್, ಡೆಸ್ಕ್‌ಟಾಪ್ ಕಂಪ್ಯೂಟರ್‌ ಗಳನ್ನು ಒದಗಿಸಲು ಸ್ವಯಂ ಪ್ರೇರಿತವಾಗಿ ಮುಂದೆ ಬಂದಿದೆ. ಇದರೊಂದಿಗೆ ವಿದ್ಯಾರ್ಥಿಗಳ ಬಳಕೆಗಾಗಿ ಎಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಂಪ್ಯೂಟರ್ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು. ಇನ್ನೂ ರೋಟರಿ ಕ್ಲಬ್‌ನವರು ವಿಂಡೋಸ್ ಓಎಸ್ ಒದಗಿಸಲಿದ್ದಾರೆ. ನಂತರ ಕಂಪ್ಯೂಟರ್ ಗಳನ್ನು ನಿಗದಿತ ಕಾಲೇಜುಗಳಿಗೆ ತಲುಪಿಸುವ ಕೆಲಸ‌ ಮಾಡಲಿದ್ದಾರೆ ಎಂದು ಡಿಸಿಎಂ ಅಶ್ವಥ್ ನಾರಯಣ್ ಮಾಹಿತಿ ಕೊಟ್ಟರು. ಕಾಗ್ನಿಜೆಂಟ್ ಸಂಸ್ಥೆಯ ಬೆಂಗಳೂರು ಕೇಂದ್ರದ ಮುಖ್ಯಸ್ಥ ನವೀನ್ ರಾವ್ ಮಾತನಾಡಿ; “ಕಾಲೇಜು ಶಿಕ್ಷಣ ಇಲಾಖೆಯ ನೇತೃತ್ವದ ಈ ನಿರ್ಣಾಯಕ ಉಪಕ್ರಮದ ಭಾಗವಾಗಿರುವುದಕ್ಕೆ ನಮಗೆ ಸಂತೋಷವಾಗಿದೆ. ಡಿಜಿಟಲ್‌ ಕಲಿಕೆಯನ್ನು ಉತ್ತೇಜಿಸುವ ಈ ಕಾರ್ಯಕ್ರಮ ಅರ್ಥಪೂರ್ಣವಾದದ್ದು” ಎಂದರು. ಡಿಜಿಟಲ್‌ ವೇದಿಕೆಯಲ್ಲಿರುವ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ ಮೂಲಕ ಕಲಿಯುವ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಸಹಾಯ ಕಾರ್ಯಕ್ರಮ ಪೂರಕ. ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹೆಚ್ಚು ಉಪಯುಕ್ತ ಎಂದು ರೋಟರಿ ಕ್ಲಬ್‌ ಜಿಲ್ಲಾ ಗರ್ವನರ್ ನಾಗೇಂದ್ರ ಪ್ರಸಾದ್ ಅವರು ಹೇಳಿದರು. ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್ ಪ್ರಭಾಕರ್ ಅವರು ಯೋಜನೆ ಕುರಿತು ಮಾಹಿತಿ‌ ನೀಡಿದರು.‌ ಕಾಗ್ನಿಜೆಂಟ್ ಸಂಸ್ಥೆಯ ನಿರ್ದೇಶಕ (ಸಿಎಸ್‌ಆರ್) ದೀಪಕ್ ಪ್ರಭು, ಸಂಸ್ಥೆಯ ಸಹಾಯಕ ಉಪಾಧ್ಯಕ್ಷ ಹರಿಸಿಂಗ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು. … . .. 12,500 - . ; : - 12,500 - ‘ ’, - . () (), , , 1390, . , - . . . . , , “ ‘ ’ , ”. , “ 30,000 12,500 . . 50 .” - . , . 12,500 -, , , . , & 365 . , , . “ ” , - , , , , . . , , 1390 , - . ., , , , ‌, , , , , . : 12,500 - - – - –-